ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಒದಗಿಸಿರುವ ವಿದ್ಯುತ್ ಸೌಲಭ್ಯವನ್ನು ಉಚಿತವಾಗಿ ಒದಗಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ(1)ರ ಸರ್ಕಾರದ ಪತ್ರದಲ್ಲಿ ತಿಳಿಸಿರುವಂತೆ 2024- 25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಂಡಿಕೆ 102: ರಲ್ಲಿ ” ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ.
ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ” ಎಂದು ಘೋಷಿಸಲಾಗಿರುತ್ತದೆ