ಜೂನ್.3ರ ನಾಳೆ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಸಂದರ್ಭದಲ್ಲಿ ಮತದಾನಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಜೂನ್.3 ಪದವೀಧರರಿಗೆ, ಶಾಲಾ ಶಿಕ್ಷಕರಿಗೆ ವಿಶೇಷ ರಜೆ ಮಂಜೂರು ಮಾಡಿ ಆದೇಶಿಸಿದೆ.
ಈ ಸಂಬಂಧ ರಾಜ್ಯ ಶಿಷ್ಟಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 03-06-2024ರ ಸೋಮವಾರದಂದು ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ದ್ವೈವಾರ್ಷಿಕ ಚುನಾವಣೆ ನಡೆಯಲಿದೆ. ಈ ಹಿನ್ನಲೆಯಲ್ಲಿ ಅಂದು ವಿಶೇಷ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ .ಯಾವ ಯಾವ ಜಿಲ್ಲೆಯ ಪದವೀಧರರು ಹಾಗೂ ಶಿಕ್ಷಕರಿಗೆ ಜೂನ್.3ರಂದು ರಜೆ.
* ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರವ್ಯಾಪ್ತಿಯ ಬೀದರ್, ಗುಲ್ಬರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ವ್ಯಾಪ್ತಿಯ ಪದವೀಧರರು, ಶಾಲಾ ಶಿಕ್ಷಕರಿಗೆ ರಜೆ.
* ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣಗೆರೆ ಜಿಲ್ಲೆಯ ಚೆನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಮತದಾನದ ಮಾಡಲು ರಜೆ ಮಂಜೂರು
* ಬೆಂಗಳೂರು ಪದವೀಧರ ಕ್ಷೇತ್ರದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ರಜೆ.
* ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಚಿತ್ರದುರ್ಗ, ದಾವಣಗೆರೆ( ಚೆನ್ನಗಿರಿ, ಹೊನ್ನಾಳಿ, ಹರಪನಹಳ್ಳಿ ತಾಲೂಕುಗಳನ್ನು ಹೊರತುಪಡಿಸಿ) ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಸಾಂದರ್ಭಿಕ ರಜೆ ಘೋಷಣೆ
* ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಶಿವಮೊಗ್ಗ, ದಾವಣೆಗರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ತಾಲೂಕು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು.
* ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ ವ್ಯಾಪ್ತಿಯ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಯ ಪದವೀಧರರು, ಶಿಕ್ಷಕರಿಗೆ ಜೂನ್.3ರಂದು ವಿಶೇಷ ಸಾಂದರ್ಭಿಕ ರಜೆ ಮಂಜೂರು.