KA.09, MB3868 ಡಸ್ಟರ್ ಹಾಡಹಗಲೇ ಗುಂಡಿಟ್ಟು ಇಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿದೆ.
ಹಾಸನದ ಕೆ.ಆರ್.ಪುರಂ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು KA.09, MB3868 ಡಸ್ಟರ್ ಕಾರ್ ಫೈರಿಂಗ್ ನಡೆಸಿದ್ದು, ಗುಂಡೇಟಿಗೆ ಓರ್ವ ಕಾರಿನಲ್ಲಿಯೇ ಸಾವನ್ನಪ್ಪಿದ್ದರೆ. ಮತ್ತೋರ್ವ ಕಾರಿನ ಮುಂದೆ ಸಾವನ್ನಪ್ಪಿದ್ದಾರೆ.
ಇಬ್ಬರ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಯಾವ ಕಾರಣಕ್ಕೆ ಕೊಲೆ ನಡೆದಿದೆ? ಕೊಲೆಯಾದವರು ಯಾರು? ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.