ರಾಜ್ಯಾಧ್ಯಂತ ಕೃತಕ ಬಣ್ಣವನ್ನು ನಿಷೇಧಿಸಿ ಸರ್ಕಾರ ಆದೇಶಿಸಿದೆ. ಅಂದರೆ ಕಬಾಬ್, ಫಿಶ್, ಚಿಕನ್ ಗೆ ಬಳಸುವಂತ ಕೃತಕ ಬಣ್ಣವನ್ನು ರಾಜ್ಯಾಧ್ಯಂತ ನಿಷೇಧ ಮಾಡಿ, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ಅದರಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗಳು ಗುಣಮಟ್ಟ ಕೃತಕ ಬಣ್ಣ ಬೆರಸುವಿಕೆಯಿಂದಾಗಿ ಕಳಪೆಯಾಗಿದ್ದು, ಇದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದಾಗಿ ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ವರದಿಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ ಎಂದಿದ್ದಾರೆ.
ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ 39 ಕಬಾಬ್ಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೊಳಪಡಿಸಲಾಗಿರುತ್ತದೆ. ವಿಶ್ಲೇಷಣೆಗೊಳಪಡಿಸಲಾದ ಮಾದರಿಗಳಲ್ಲಿ 08 ಕಬಾಬ್ ಮಾದರಿಗಳು ಕೃತಕ ಬಣ್ಣದಿಂದ (ಸನ್ಸೆಟ್ ಯೆಲ್ಲೋ 07 ಮಾದರಿಗಳು ಹಾಗೂ ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 01) ಕೂಡಿರುವುದರಿಂದ ಅಸುರಕ್ಷಿತ ಎಂದು ವಿಶ್ಲೇಷಣಾ ವರದಿಗಳಲ್ಲಿ ಕಂಡುಬಂದಿದ್ದು, The Food Safety and Standards Act, 2006 ರ ನಿಯಮ 3(1) (zz)(viii)ರನ್ವಯ ಅಸುರಕ್ಷಿತ ಎಂದು ವರದಿ ಮಾಡಲ್ಪಟ್ಟಿರುತ್ತವೆ ಎಂದು ತಿಳಿಸಿದ್ದಾರೆ.The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ರನ್ವಯ ಕಬಾಬ್ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟು ಮಾಡಬಹುದಾಗಿರುತ್ತದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಕಬಾಬ್ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006 ರ ನಿಯಮ 3 (1)(zz)(viii) ಮತ್ತು The Food Safety and Standards (Food Products Standards and Food Additives) Regulations, 2011 ರ ನಿಯಮ 16.0 ಗಳಡಿ ಅವಕಾಶವಿಲ್ಲದಿರುವುದರಿಂದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 30(2)(ಎ)ರಡಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ವೆಜ್ /ಚಿಕನ್/ಫಿಶ್ ಇತರೆ ಕಬಾಬ್ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಉಲ್ಲಂಘನೆಯ ಪ್ರಕರಣಗಳು ಕಂಡುಬಂದಲ್ಲಿ ತಯಾರಿಸುವವರ ಮೇಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ನಿಯಮ 59ರಡಿ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು ರೂ.10.00 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.