ಮಂಗಳೂರು, ಜೂ. 27: ವಿದ್ಯುತ್ ತಂತಿ ತಗುಲಿ ಇಬ್ಬರು ರಿಕ್ಷಾ ಚಾಲಕರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಗರದ ರೊಸಾರಿಯೊ ಶಾಲೆಯ ಬಳಿ ನಡೆದಿದೆ. ಘಟನೆ ನಿನ್ನೆ ರಾತ್ರಿ 9ಗಂಟೆಗೆ ನಡೆದಿರುವುದು ಸಿಸಿ ಕ್ಯಾಮೆರಾ ದಲ್ಲಿ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮೃತ ರಿಕ್ಷಾ ಚಾಲಕರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ನಿವಾಸಿ ರಾಜು ಮತ್ತು ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ರಾಮಕುಂಜ ನಿವಾಸಿ ದೇವರಾಜು ಎಂದು ಗುರುತಿಸಲಾಗಿದೆ. ಒಬ್ಬರು ಪುತ್ತೂರು ಹಾಗೂ ಇನ್ನೊಬ್ಬರು ಸಕಲೇಶಪುರದವರು. ಇಬ್ಬರೂ ಪಾಂಡೇಶ್ವರದ ರೊಸಾರಿಯೋ ಚರ್ಚ್ ಹಿಂಬದಿ ಬಾಡಿಗೆ ರೂಂನಲ್ಲಿ ವಾಸವಾಗಿದ್ದರು.