ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಸ್ವಾಮೀಜಿ ಅವರಲ್ಲ ಎಂದು ಹೇಳಿದ್ದಾರೆ.
ಗುರುವಾರ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.