ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನದಿಂದ ಊರಿಗೆ ಮರಳುತ್ತಿದ್ದವರ ಟಿಟಿ ವಾಹನವೊಂದು ಅಪಘಾತಕ್ಕೀಡಾಗಿ ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿರುವ ಭೀಕರ ದುರಂತ ಸಂಭವಿಸಿದೆ.
ಈ ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿಯ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ಶಿವಮೊಗ್ಗ ಮೂಲದವರಾಗಿದ್ದು, ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ ಗುದ್ದಿದೆ. ಅಪಘಾತದ ರಭಸಕ್ಕೆ ಟಿಟಿ ವಾಹನ ನುಜ್ಜು ಗುಜ್ಜಾಗಿದೆ.ಅಪಘಾತದಲ್ಲಿ ಮೃತಪಟ್ಟವರ ವಿವರ
ಪರಶುರಾಮ್ ( 45 ), ಭಾಗ್ಯ (40), ನಾಗೇಶ್ ( 50), ವಿಶಾಲಾಕ್ಷಿ( 50), ಸುಭದ್ರಾ ಭಾಯಿ( 65), ಪುಣ್ಯ( 50), ಮಂಜುಳಾ ಭಾಯಿ( 57), ಆದರ್ಶ್ ( 23) ಡ್ರೈವರ್, ಮಾನಸಾ( 24), ರೂಪಾ( 40), ಮಂಜುಳಾ( 50) ಇನ್ನು ಘಟನೆಯಲ್ಲಿ ಮೃತಪಟ್ಟ 4 ವರ್ಷದ ಮಗು ಹಾಗೂ 6 ವರ್ಷದ ಮಗುವಿನ ಹೆಸರು ತಿಳಿದು ಬಂದಿಲ್ಲ.
ಇನ್ನು ಈ ಅಪಘಾತದಲ್ಲಿ ಆಸ್ಪತ್ರೆಯಲ್ಲಿರುವ ಗಾಯಾಳು ಅರ್ಪಿತಾ(18 ) ಸೇರಿದಂತೆ ಮತ್ತೋರ್ವ ಚಿಕಿತ್ಸೆ ಪಡೆಯುತ್ತಿದ್ದಾರೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆದಿರುವ ಅಗ್ನಿಶಾಮಕ ಇಲಾಖೆ ಸಿಬ್ಬಂದಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಬ್ಯಾಡಗಿ ಠಾಣೆಯ ಪೊಲೀಸರು ಸ್ಥಲಕ್ಕೆ ಭೇಟಿ ನೀಡಿ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ