30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಿಎಂಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಸಂಭವಿಸಿದ್ದು, ರಸ್ತೆ ಮಧ್ಯೆಯೇ ಬಸ್ ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ನಡೆದಿದೆ.
ಪ್ರಯಾಣಿಕರನ್ನು ಹೊತ್ತು ತೆರಳುತ್ತಿದ್ದ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಬಸ್ ಚಾಲಕ ಬಸ್ ರಸ್ತೆ ಮಧ್ಯೆಯೇ ನಿಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಕೆಲ ಸಮಯದಲ್ಲೇ ನೋಡ ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಸಂಪೂರ್ಣ ಬಸ್ ಆವರಿಸಿ ಹೊತ್ತಿ ಉರಿದಿದೆ.
ಸಂಪೂರ್ಣ ಬಸ್ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಬಿಎಂಟಿಸಿ ಬಸ್ ನಲ್ಲಿ ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.