ಸಕಲೇಶಪುರ. ಆನೆ ಮಹಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ಸತ್ತಿಗಾಲ್ ಗ್ರಾಮದ ಅಂಗನವಾಡಿ ಶಾಲೆಯ ಪಕ್ಕದ ಮನೆ ಗಾಳಿ ಮಳೆಗೆ ಬಿದ್ದಿದ್ದು ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.
ಬಡ ಕುಟುಂಬವಾದ ಹಸೈನರ್ ಹಾಗೂ ಜೈನಾಬಿ ಅವರ ವಾಸದ ಮನೆ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ಮನೆ ಕುಸಿದು ಬಿದ್ದಿದ್ದು. ಅಲ್ಲೇ ಪಕ್ಕದಲ್ಲಿ ಕುಳಿತಿದ್ದ ರಿಹಾನ್ ಪ್ರಾಣ ಅಪಾಯದಿಂದ ಪಾರಾಗಿದ್ದಾರೆ.
ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ