ಸಕಲೇಶಪುರ – ಬಾರಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಸಿಲ್ವಾರ್ ಮರ. ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ ಬಡ ಕುಟುಂಬ ಪ್ರಾಣಾಪಾಯದಿಂದ ಪಾರು.
ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಬಿರಡಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನ್ನಪುರ ಗ್ರಾಮದಲ್ಲಿನ ಲಕ್ಷ್ಮೀ ಎಂಬುವರಿಗೆ ಸೇರಿದ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದಿದೆ.
ದಿನಗೂಲಿ ಮಾಡಿ ಜೀವನ ಸಾಗಿಸುತ್ತಿರುವ ಬಡ ಕುಟುಂಬ ಇದಾಗಿದೆ. ವಯಸ್ಸಾದ ಲಕ್ಷ್ಮೀ ಎಂಬುವವರು ತಮ್ಮ ಇಬ್ಬರು ಮೊಮ್ಮಕ್ಕಳನ್ನು ದಿನಗೂಲಿ ಮಾಡಿ ನೋಡಿಕೊಳ್ಳುತ್ತಿದ್ದು ಕಬ್ಬಿಣದ ರೂಪಿಂಗ್ ಅದ ಕಾರಣ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದು ಮನೆಯ ಮೇಲ್ಚಾವಣಿ ಸಂಪೂರ್ಣ ನುಜ್ಜುಗುಜ್ಜಗಿದೆ. ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಸ್ಪಂದಿಸುವಂತೆ ಜನ್ನಪುರ ಗ್ರಾಮಸ್ಥರು ಮನವಿ ಮಾಡಿದ್ದಾರೆ.