ರಾಷ್ಟ್ರೀಯ ಹೆದ್ದಾರಿ 75 ಸಂಪೂರ್ಣ ಕಳಪೆ ಕಾಮಗಾರಿ. ಗುತ್ತಿಗೆದಾರರೊಂದಿಗೆ NHI ಅಧಿಕಾರಿಗಳು ಶಾಮೀಲು ರಘು ಸಕಲೇಶಪುರ ನಿಯೋಗ ಕೇಂದ್ರ ಸಚಿವರ ಭೇಟಿ.
ಸಕಲೇಶಪುರ – ಮಲೆನಾಡು ಭಾಗದಲ್ಲಿ ಬಾರಿ ಮಳೆಯಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕಳೆದ 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ಗುಣಮಟ್ಟ ಕಾಪಡುತ್ತಿಲ್ಲ.
ರಾಷ್ಟ್ರೀಯ ಹೆದ್ದಾರಿಯಲ್ಲಿ 75 ಸಕಲೇಶಪುರ – ಮಾರನಹಳ್ಳಿ ರಸ್ತೆ ಕಾಮಗಾರಿ ಸಂಪೂರ್ಣ ಕಳಪೆ ಮತ್ತು ಗುಣಮಟ್ಟ ಕಳೆದುಕೊಂಡಿರುವ ಕಾಮಗಾರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಅಕ್ರಮದಲ್ಲಿ ಶಾಮೀಲಾಗಿದ್ದು ವಿಶೇಷ ಇಲಾಖಾ ತನಿಖೆ ನಡೆಸಿ ಇವರ ಮೇಲೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮನವಿ ನೀಡಿದರು.