ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಹೆತ್ತೂರು ಗ್ರಾಮ ಲೆಕ್ಕಾಧಿಕಾರಿ ಮೋಹನ್ ಕುಮಾರ್
ಸಕಲೇಶಪುರ: ಜಮೀನು ಮಂಜೂರಾತಿ ಹಾಗೂ ಸ್ಥಳ ಪರಿಶೀಲನೆಗಾಗಿ 25000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಿನ್ನೆಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಹೆತ್ತೂರು ನಾಡಕಚೇರಿಯಲ್ಲಿ ಇಂದು ಇನಡೆದಿದೆ.
ಡಿ.ಆರ್.ಮೋಹನ್ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು ಲೋಕೇಶ್ ಎಂಬುವವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ ಈ ಅಧಿಕಾರಿ.ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ಧಾಳಿ ಮಾಡಿದ್ದಾರೆ.
ಲಂಚದ ಹಣದ ಸಮೇತ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು, ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.