ಬಿಗ್ಬಾಸ್ ಶೊ ಸ್ಥಗಿಗೊಳಿಸಲು ಸೂಚನೆ !
ಬೆಂಗಳೂರು.ಕರ್ನಾಟಕದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-11 ನಡೆಯುತ್ತಿರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾಳಿಗೊಂಡನಹಳ್ಳಿ ಸರ್ವೆ ನಂ.128/1ರ ವಾಣಿಜ್ಯ, ವ್ಯಾಪಾರ ವಸತಿಯೇತರ ವ್ಯವಹಾರದ ಲೈಸೆನ್ಸ್ ರದ್ದು ಮಾಡಿದ್ದು,
ಶೋ ಸ್ಥಗಿತಗೊಳಿಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಪಂ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದಾರೆ.
ಬಿಗ್ ಬಾಸ್ ಕಾರ್ಯಕ್ರಮವನ್ನು ಕಾನೂನು ಬಾಹಿರವಾಗಿ ನಡೆಸಲಾಗುತ್ತಿದೆ. ಕಾರ್ಮಿಕ ಇಲಾಖೆ, ಸ್ಥಳೀಯ ಗ್ರಾಮ ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೆ ನಡೆಸಲಾಗುತ್ತಿದೆ ಎಂದು ಪತ್ರಕರ್ತರಾದ ರಾಘವೇಂದ್ರ ಆಚಾರ್ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರು.
ಈ ಹಿನ್ನೆಲೆ ಭೂಪರಿವರ್ತನೆ ಆದೇಶವನ್ನು ಡಿಸಿ ರದ್ದು ಮಾಡಿದ್ದಾರೆ. ರಾಮೋಹಳ್ಳಿ ಗ್ರಾಮ ಪಂಚಾಯಿತಿಯವರು ಬಿಗ್ಬಾಸ್ ಶೋ ನಡೆಸಲು ಅನುಮತಿ ನೀಡಿಲ್ಲ ಎಂಬುದಾಗಿ ತಿಳಿಸಿರುವ ಕಾರಣ ಕೂಡಲೇ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಕ್ಕೆ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದಾರೆ.
ರಮೋಹಳ್ಳಿ ಪಿಡಿಒ, ಜಮೀನಿನ ಮಾಲೀಕ ಪಡೆದಿದ್ದ ವಾಣಿಜ್ಯ, ವ್ಯಾಪಾರ ವಸತಿಯೇತರ ವ್ಯವಹಾರದ ಲೈಸೆನ್ಸ್ ಅನ್ನು ರದ್ದು ಮಾಡಿದ್ದು ಬಿಗ್ಬಾಸ್ ಶೋ ನಿಲ್ಲಿಸುವಂತೆ ಆದೇಶಿಸಿದ್ದಾರೆ. ಮುಂದೇನಾಗುತ್ತದೋ ಕಾದು ನೋಡಬೇಕಿದೆ.