ರಸ್ತೆ ಬದಿಯ ಕ್ಯಾಂಟಿನ್ಗೆ ನುಗ್ಗಿ ಪಲ್ಟಿಯಾದ ಲಾರಿ:ಸ್ಥಳದಲ್ಲೆ ಇಬ್ಬರ ಸಾವು, ಮೂವರ ಸ್ಥಿತಿ ಗಂಭೀರ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕ್ಯಾಂಟಿನ್ಗೆ ನುಗ್ಗಿದ ಲಾರಿ ಇಬ್ಬರನ್ನು ಬಲಿ ಪಡೆದಿದ್ದು ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಸಕಲೇಶಪುರ ತಾಲ್ಲೂಕಿನ, ಗುಳಗಳಲೆ ಸಮೀಪ ನಡೆದಿದೆ.
ಗಾರೆ ಕೆಲಸಕ್ಕಾಗಿ ಬಂದಿದ್ದ ಚಿತ್ರದುರ್ಗ ಮೂಲದ ವೀರೇಶ್ ಮೃತ ವ್ಯಕ್ತಿ. ಮೃತಪಟ್ಟಿರುವ ಮತ್ತೊಬ್ಬ ವ್ಯಕ್ತಿ ಲಾರಿಯ ಸಿಬ್ಬಂದಿಯಾಗಿದ್ದು ಗುರುತು ಪತ್ತೆಯಾಗಿಲ್ಲ.
ಗಾಯಾಳುಗಳಿಗೆ ಸಕಲೇಶಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಕ್ಯಾಂಟಿನ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಲಾರಿಯಡಿ ಕ್ಯಾಂಟಿನ್ ಮುಂದೆ ನಿಲ್ಲಿಸಿದ್ದ ಬೈಕ್ಗಳು ಸಿಲುಕಿವೆ. ಲಾರಿ ಮೊದಲು ಕ್ಯಾಂಟಿನ್ಗೆ ಡಿಕ್ಕಿ ಹೊಡೆದಿದ್ದರಿಂದ ಭಾರಿ ಅನಾಹುತ ತಪ್ಪಿದೆ.