ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕರೆ ನೀಡಿರುವ ಬಂದ್ ಹಿನ್ನೆಲೆಯಲ್ಲಿ ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಬಹುತೇಕ ಕಡೆ ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಆಚರಿಸಲಾಯಿತು.
ಈ ಮಧ್ಯೆ ಕಾನೂನು ಸುವ್ಯವಸ್ಥೆಯ ಎಡಿಜಿಪಿ ಆರ್. ಹಿತೇಂದ್ರ ಮಂಗಳೂರಿಗೆ ಆಗಮಿಸಿದ್ದಾರೆನಗರದಲ್ಲಿ ಖಾಸಗಿ ಬಸ್, ಆಟೋ, ಟ್ಯಾಕ್ಸಿ ರೋಡಿಗೆ ಇಳಿದಿಲ್ಲ.
ಕೆಎಸ್ಸಾರ್ಟಿಸಿ ಬಸ್ ಸಂಚಾರ ಬೆಳಗ್ಗೆ ಆರಂಭವಾದರೂ ನಂತರ ನಿಲ್ಲಿಸಲಾಯಿತು. ಖಾಸಗಿ ವಾಹನಗಳು ಬೆರಳೆಣಿಕೆ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದ್ದವು. ಹೊರ ಜಿಲ್ಲೆಗಳಿಂದ ಮಂಗಳೂರು ನಗರದೊಳಗೆ ಪ್ರವೇಶಿಸುವ ಕೆಎಸ್ಸಾರ್ಟಿಸಿ ಬಸ್ ಗಳನ್ನು ಪಡೀಲ್ ಬಳಿ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ ನಂತರ ಬಂದ ಕೆಎಸ್ಸಾರ್ಟಿಸಿ ಬಸ್ ಗಳನ್ನು ಬಿ.ಸಿ. ರೋಡಿನಲ್ಲೇ ತಂಗಬೇಕಾಯಿತು.
ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.