ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್(Kudremukh Iron Ore Company Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಕಂಪನಿ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಕೂಡಲೇ ಅರ್ಜಿ ಹಾಕಿ. ಜುಲೈ 25, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಆಸಕ್ತರು ಆನ್ಲೈನ್/ ಆಫ್ಲೈನ್ ಮೂಲಕ ಅಪ್ಲೈ ಮಾಡಬೇಕು.ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಂಪನಿ ಸೆಕ್ರೆಟರಿಯಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಜೂನ್ 30, 2024ಕ್ಕೆ ಗರಿಷ್ಠ 48 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ
ನೀಡಲಾಗುತ್ತದೆ.ಮಾಸಿಕ ₹ 1,00,000- 2,60,000
ಉದ್ಯೋಗದ ಸ್ಥಳ:
ಬೆಂಗಳೂರುಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿಯನ್ನು ಕಳುಹಿಸಲು ಆಫ್ಲೈನ್ ವಿಳಾಸ:
ಮುಖ್ಯ ಜನರಲ್ ಮ್ಯಾನೇಜರ್ (HR & Admin)
HR ಇಲಾಖೆ
KIOCL ಲಿಮಿಟೆಡ್
ಕೋರಮಂಗಲ 2ನೇ ಬ್ಲಾಕ್
ಸರ್ಜಾಪುರ ರಸ್ತೆ
ಬೆಂಗಳೂರು-560 034ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/06/2024
ಅರ್ಜಿ ಸಲ್ಲಿಸಲು ಕೊನೆಯ ದಿನ(ಆನ್ಲೈನ್): ಜುಲೈ 25, 2024
ಆಫ್ಲೈನ್ ಮೂಲಕ ಅಪ್ಲೈ ಮಾಡಲು ಕೊನೆಯ ದಿನ: ಆಗಸ್ಟ್ 5, 2024